ನಿವೃತ್ತರ ದಿನ

ಡಿಸೆಂಬರ್ ೧೭ ಅನ್ನು 'ನಿವೃತ್ತರ ದಿನ' ಎಂದು ಆಚರಿಸಲಾಗುತ್ತಿದೆ.

ಹಿನ್ನೆಲೆ

೧೯೭೯ ರ ಮಾರ್ಚ್ ೩೧ರ ನಂತರ ನಿವೃತ್ತರಾದವರಿಗೆ ಕೇಂದ್ರ ಸರ್ಕಾರ ಉದಾರೀಕೃತ ನಿವೃತ್ತಿ ವೇತನ ಪದ್ಧತಿಯನ್ನು ಜಾರಿಗೊಳಿಸಿದಾಗ ಆ ದಿನಾಂಕದ ಹಿಂದೆ ನಿವೃತ್ತರಾದವರಿಗೆ ಈ ಸೌಲಭ್ಯ ದೊರೆಯದೇ ಹೋಯಿತು. ಇಂಥವರಲ್ಲೊಬ್ಬರು ಸರ್ಕಾರದ ಈ ಆಜ್ಞೆಯ ವಿರುದ್ಧವಾಗಿ ಸುಪ್ರೀಂಕೋರ್ಟ್‌ ನಲ್ಲಿ ನ್ಯಾಯಕ್ಕಾಗಿ ಮೊರೆಯಿಟ್ಟರು. ೧೯೮೨ರ ಡಿಸೆಂಬರ್ ೧೭ ರಂದು ಸುಪ್ರೀಂಕೋರ್ಟಿನ ನ್ಯಾಯಾಧೀಶರಾದ ವೈ.ವಿ. ಚಂದ್ರಾಚೂಡ ಅವರು ನಿವೃತ್ತರ ಪರವಾಗಿ ಮಹತ್ವದ ತೀರ್ಪೊಂದನ್ನು ನೀಡಿದರು.`ನಿವೃತ್ತಿ ವೇತನವೆಂಬುದು ಸರ್ಕಾರದ ಔದಾರ್ಯದ ಕೊಡುಗೆಯಲ್ಲ. ಅದು ಸರ್ಕಾರ ನೀಡುವ ದಯಾಭಿಕ್ಷೆಯೂ ಅಲ್ಲ. ನಿವೃತ್ತಿ ಹೊಂದಿದ ಪ್ರತಿಯೊಬ್ಬ ಸರ್ಕಾರ ನೌಕರನೂ ಯಾವುದೇ ತಾರತಮ್ಯವಿಲ್ಲದೆ ಪಿಂಚಣಿ ಪಡೆಯಲು ಅರ್ಹ. ನಿವೃತ್ತಿ ವೇತನ ನಿವೃತ್ತಿ ನೌಕರನ ಹಕ್ಕು' ಎಂದು ಹೇಳಿದರು. ೧೯೭೯ರ ಮಾರ್ಚ್ ೩೧ರ ನಂತರ ನಿವೃತ್ತಿಯಾದವರಿಗೆ ಅಷ್ಟೇ ಅಲ್ಲ, ಹಿಂದೆ ನಿವೃತ್ತರಾದವರಿಗೂ ಉದಾರೀಕೃತ ನಿವೃತ್ತಿ ವೇತನ ಪದ್ಧತಿಯ ಸೌಲಭ್ಯವನ್ನು ನೀಡಬೇಕೆಂದು ನ್ಯಾಯಾಲಯ ಆದೇಶ ನೀಡಿತು. ತೀರ್ಪು ಹೊರಬಿದ್ದ ಡಿಸೆಂಬರ್ ೧೭ ರ ಆ ದಿನವನ್ನು ಈಗ `ನಿವೃತ್ತರ ದಿನ'ವೆಂದು ಆಚರಿಸಲಾಗುತ್ತಿದೆ.

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ