ಎಂ. ಎಚ್. ಕೃಷ್ಣಯ್ಯ

ಪ್ರೊ. ಎಂ. ಎಚ್. ಕೃಷ್ಣಯ್ಯ (ಜುಲೈ ೨೧, ೧೯೩೭) ಪ್ರಸಿದ್ಧ ಸಾಹಿತ್ಯ ಮತ್ತು ಕಲಾ ವಿಮರ್ಶಕರಾಗಿ, ಕಲಾ ಪೋಷಕರಾಗಿ, ಕನ್ನಡ ಸಾಹಿತ್ಯ ಅಕಾಡೆಮಿ ಒಳಗೊಂಡಂತೆ ಹಲವಾರು ಸಂಸ್ಥೆಗಳ ಕಾರ್ಯನಿರ್ವಾಹಕರಾಗಿ ಮಹತ್ವದ ಸೇವೆ ಸಲ್ಲಿಸಿದವರಾಗಿದ್ದಾರೆ.

ಎಂ. ಎಚ್. ಕೃಷ್ಣಯ್ಯ
ಜನನಜುಲೈ ೨೧, ೧೯೩೭
ಮೈಸೂರು
ವೃತ್ತಿಸಾಹಿತಿ, ಕರ್ನಾಟಕ ಅಕಾಡೆಮಿ ಅಧ್ಯಕ್ಷರು, ನಿವೃತ್ತ ಪ್ರಾಧ್ಯಾಪಕರು
ವಿಷಯಕನ್ನಡ ಸಾಹಿತ್ಯ

ಜೀವನ

ಪ್ರಸಿದ್ಧ ಸಾಹಿತ್ಯ ವಿಮರ್ಶಕ ಮತ್ತು ಕಲಾಪ್ರೇಮಿಗಳಾದ ಪ್ರೊ. ಎಂ. ಎಚ್. ಕೃಷ್ಣಯ್ಯನವರು ಜುಲೈ 21, 1937ರ ವರ್ಷದಲ್ಲಿ ಮೈಸೂರಿನಲ್ಲಿ ಜನಿಸಿದರು. . ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮನವರು. ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ[೧].

ಬರಹಗಳು

ಕೃಷ್ಣಯ್ಯನವರು ಬರಹಗಾರರು, ಸಂಗೀತಗಾರರು, ಶಿಲ್ಪಿಗಳು, ಕಲಾವಿದರೊಂದಿಗೆ ಬೆರೆತು ಅವರ ಬದುಕನ್ನು ಅರಿತು, ಅವನ್ನು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿರುವುದು ಅವರ ಮಹತ್ವದ ಕೊಡುಗೆಗಳೆನಿಸಿವೆ. ಪ್ರಸಿದ್ಧ ವಿದ್ವಾಂಸರೂ, ಶಿಸ್ತಿನ ಪ್ರವಚನಕಾರರೂ ಆದ ಕೃಷ್ಣಯ್ಯನವರ 30ಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ, ಆರ್. ಎಮ್. ಹಡಪದ್, ರೂಪಶಿಲ್ಪಿ ಬಸವಯ್ಯ, ಶ್ರಂಗಾರ ಲಹರಿ, ಕಲಾ ದರ್ಶನ, ರಂಗಭೂಮಿ ಮತ್ತು ಸೌಂದರ್ಯ ಪ್ರಜ್ಞೆ ಮುಂತಾದ ಬರಹಗಳು ಹಾಗೂ ಕುವೆಂಪು ಸಾಹಿತ್ಯ : ಚಿತ್ರ ಸಂಪುಟದಂತಹ ಸಂಪಾದನೆಗಳು ಈ ಕೃತಿಗಳಲ್ಲಿ ಸೇರಿವೆ. ಅವರ 'ಕಲಾ ದರ್ಶನ' ಕೃತಿ ಕನ್ನಡ ನಾಡಿನಲ್ಲಿ ಗೌರವಾನ್ವಿತ ಸಂಪುಟವೆನಿಸಿವೆ.

ಕಾರ್ಯನಿರ್ವಹಣೆ

ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್, ಕನ್ನಡ ಪುಸ್ತಕ ಪ್ರಾಧಿಕಾರ, ತಂಜಾವೂರಿನಲ್ಲಿ ಕೇಂದ್ರ ಹೊಂದಿರುವ ದಕ್ಷಿಣ ಭಾಗೀಯ ಸಾಂಸ್ಕೃತಿಕ ಕೇಂದ್ರ ಮುಂತಾದೆಡೆಗಳಲ್ಲಿ ಅವರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ ಒಳಗೊಂಡಂತೆ ಹಲವು ರೀತಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಲೋಕದಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಪ್ರೊ. ಕೃಷ್ಣಯ್ಯನವರು ತಮ್ಮ ಕಾರ್ಯದಕ್ಷತೆ, ಸರಳ, ಸಜ್ಜನಿಕೆಗಳಿಗೆ ಹೆಸರಾಗಿದ್ದಾರೆ.

ಪ್ರಶಸ್ತಿ ಗೌರವಗಳು

ಕೃಷ್ಣಯ್ಯನವರ ಶೃಂಗಾರ ಲಹರಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಮಾಸ್ತಿ ಪ್ರಶಸ್ತಿ ಅವರಿಗೆ ಸಂದ ಮತ್ತೊಂದು ವಿಶಿಷ್ಟ ಹಿರಿಮೆ[೨] .

ಉಲ್ಲೇಖಗಳು

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ