ಫಕೀರ ಮಹಮದ್ ಕಟ್ಪಾಡಿ
- ಲೇಖನ
- ಚರ್ಚೆ
ಫಕೀರ ಮಹಮದ್ ಕಟ್ಪಾಡಿಯವರು ತಮ್ಮ ಕನ್ನಡ ಸಾಹಿತ್ಯದಲ್ಲಿ ವಿಶೇಷವಾಗಿ ದಕ್ಷಿಣ ಕನ್ನಡದ ಮುಸ್ಲಿಂ ಸಮುದಾಯದ ಸಂಪ್ರದಾಯಗಳನ್ನು ಹಾಗು ನೋವು ನಲಿವುಗಳನ್ನು ನೈಜವಾಗಿ ವ್ಯಕ್ತಪಡಿಸಿದ್ದಾರೆ.ಇವರ ಕಥೆಗಳು ಭಾರತದ ವಿವಿಧ ಭಾಷೆಗಳಿಗೆ ಅನುವಾದಗೊಂಡಿವೆ. ಕಟ್ಪಾಡಿಯವರ ಕೃತಿಗಳು.
’ಗೋರಿ ಕಟ್ಟಿಕೊಂಡವರು’, ’ನೋಂಬು’, ’ದಜ್ಜಾಲ’, ’ಅತ್ತರ್ ಹಾಜಿಕ್ ಮತ್ತು ಇತರ ಕತೆಗಳು’, ’ಪಚ್ಚ ಕುದುರೆ’ ಕತಾಸಂಕಲನಗಳು. ನೀಳ್ಗತೆಗಳ ಸಂಕಲನ ’ಕಡವು ಮನೆ’ ಹಾಗೂ ’ಸರಕುಗಳು’ ಮತ್ತು ’ಕಚ್ಚಾದ’ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.’ಬೇರೂತಿನಿಂದ ಜರುಸಲೇಮಿಗೆ (2010) ಮತ್ತು ಮಂಟೋ ಬರೆದ ದೇಶ ವಿಭಜನೆಯ ಕತೆಗಳು’ ಅನುವಾದ ಕೃತಿಗಳು. ’ಕಯ್ಯೂರಿನ ರೈತವೀರರು’, ’ರಾಷ್ಟ್ರೀಯತೆ ಮತ್ತು ಮುಸ್ಲಿಮರು’, ’ಸೂಫಿ ಸಂತರು’ ’ಸೂಫಿ ಮಹಿಳೆಯರು’, ’ಉತ್ತರ ಕರ್ನಾಟಕದ ಸೂಫಿಸಂತರು’ ಕೃತಿಗಳನ್ನು ಪ್ರಕಟಿಸಿದ್ದಾರೆ.
.