ಸರಜೂ ಕಾಟ್ಕರ್

ಸರಜೂ ಕಾಟ್ಕರ್ ಇವರು ೧೯೫೩ ಅಗಸ್ಟ ೧೪ರಂದು ಹುಬ್ಬಳ್ಳಿಯಲ್ಲಿ ಜನಿಸಿದರು. ೧೯೭೬ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಏ. ಪದವಿ ಪಡೆದರು. ಅನಂತರ “ಕನ್ನಡ ಮರಾಠಿ ದಲಿತ ಸಾಹಿತ್ಯ, ಒಂದು ತೌಲನಿಕ ಅಧ್ಯಯನ”ದ ಬಗೆಗೆ ಮಹಾಪ್ರಬಂಧ ರಚಿಸಿ ಪಿ.ಎಚ್‍ಡಿ. ಪದವಿ ಸಂಪಾದಿಸಿದರು.

ಉದ್ಯೋಗ

೧೯೭೫ರಿಂದ ೧೯೮೦ರವರೆಗೆ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ ಬಳಿಕ ೧೯೮೧ರಿಂದ ಇಂಡಿಯನ್ ಎಕ್ಸಪ್ರೆಸ್ ಪತ್ರಿಕಾಬಳಗದ ಸುದ್ದಿಗಾರರಾಗಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾಹಿತ್ಯ

ಸರಜೂ ಕಾಟ್ಕರರು ಒಂಬತ್ತು ಕಾವ್ಯಸಂಕಲನಗಳನ್ನು, ಒಂದು ಕಾದಂಬರಿಯನ್ನು, ಐದು ವೈಚಾರಿಕ ಕೃತಿಗಳನ್ನು, ಒಂದು ನಾಟಕ, ಒಂದು ಪ್ರವಾಸಕಥನ ಹಾಗು ಮೂರು ಅನುವಾದ ಕೃತಿಗಳನ್ನು ಪ್ರಕಟಿಸಿದ್ದಾರೆ.ಇವರ ಕೆಲವು ಕೃತಿಗಳು:

  • ಮ್ಯಾನಿಫೆಸ್ಟೊ
  • ಏಕಾಂತದ ಮನುಷ್ಯ
  • ಹಸಿದ ನೆಲ
  • ಗಾಂಧಿ ಸಿಕ್ಕ
  • ಸೂರ್ಯ
  • ಅವ್ವ

ಸನ್ಮಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೦೧ನೆಯ ಸಾಲಿನ ಗೌರವ ಪ್ರಶಸ್ತಿ ಇವರಿಗೆ ಲಭಿಸಿದೆ. ೧೯೮೮ರಿಂದ ೧೯೯೮ರವರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿದ್ದರು.


🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ